
ಬಾಗಲಕೋಟೆಯ ಗಲಗಲಿ-ರಬಕವಿ ನಡುವೆ ರಸ್ತೆ ಕಾಮಗಾರಿಯ ನಿರ್ಲಕ್ಷ್ಯದಿಂದಾಗಿ ಕಾರೊಂದು ಕೃಷ್ಣಾ ನದಿಗೆ ಬಿದ್ದಿದ್ದು, ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಇದೇ ಸ್ಥಳದಲ್ಲಿ 3 ಕಾರುಗಳು ನದಿಗೆ ಬಿದ್ದಿದ್ದು, ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದರೂ ಅಧಿಕಾರಿಗಳು ಸೂಚನಾ ಫಲಕ ಅಳವಡಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ದಾವಣಗೆರೆಯ ಹೆಬ್ಬಾಳ ಟೋಲ್ ಬಳಿ ನಡೆದ ಮತ್ತೊಂದು ಅಪಘಾತದಲ್ಲಿ ಲಾರಿ ಡಿಕ್ಕಿ ಹೊಡೆದರೂ ಕಾರಿನಲ್ಲಿದ್ದವರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.