Health & Environment
ಕರ್ನಾಟಕದ 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಆರೆಂಜ್ ಅಲರ್ಟ್

ಕರ್ನಾಟಕದ 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಆರೆಂಜ್ ಅಲರ್ಟ್

prajavani1d
THE BRIEF
1

ಕರ್ನಾಟಕದ 16 ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

2

ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ 40-60 ಕಿ.ಮೀ ವೇಗದ ಗಾಳಿ ಬೀಸಲಿದೆ.

3

ಕರಾವಳಿ ತೀರದಲ್ಲಿ ಬಿರುಗಾಳಿ ವೇಗ 60 ಕಿ.ಮೀ ತಲುಪುವ ಸಾಧ್ಯತೆ ಇರುವುದರಿಂದ ಮೀನುಗಾರರು ಎಚ್ಚರ ವಹಿಸಲು ಸೂಚಿಸಲಾಗಿದ್ದು, ಶನಿವಾರವೂ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ಮುಂದುವರಿಯಲಿದೆ.