
8 ತಿಂಗಳ ಹಿಂದೆ ಬೆಂಗಳೂರಿನ ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿ ಅವರನ್ನು ಸಿಐಡಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಒಬ್ಬ ಯುವತಿ ಹೊಸ ಸಿಮ್ ಕಾರ್ಡ್ ಖರೀದಿಸಲು ತನ್ನ ಆಧಾರ್ ಕಾರ್ಡ್ ಬಳಸಿದಾಗ ಸಿಐಡಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದ್ದು, ಅದರ ಆಧಾರದ ಮೇಲೆ ತನಿಖೆ ನಡೆಸಿ ಪತ್ತೆ ಹಚ್ಚಲಾಗಿದೆ.
ತನಿಷ್ಕಾ 18 ವರ್ಷ ತುಂಬಿದ್ದರಿಂದ ಪತಿ ಜೊತೆ ಹೋಗಲು ಕೋರ್ಟ್ ಅನುಮತಿ ನೀಡಿದೆ, ಆದರೆ ಅಪ್ರಾಪ್ತೆ ತೇಜಸ್ವಿನಿ ಪತ್ತೆಗೆ ಸಿಐಡಿ ತಂಡ ಮುಂದಾಗಿದೆ.