
ಭುವನೇಶ್ವರದಲ್ಲಿ ನಡೆಯುತ್ತಿರುವ 52ನೇ ಜೂನಿಯರ್ ರಾಷ್ಟ್ರೀಯ ಈಜು ಚಾಂಪಿಯನ್ಷಿಪ್ನಲ್ಲಿ ಕರ್ನಾಟಕದ ಈಜುಪಟುಗಳು ಗುರುವಾರ ಐದು ಚಿನ್ನ ಸೇರಿದಂತೆ ಒಟ್ಟು 11 ಪದಕಗಳನ್ನು ಗೆದ್ದಿದ್ದಾರೆ.
ಕರ್ನಾಟಕ ರಾಜ್ಯವು ಈವರೆಗೆ ಒಟ್ಟು 21 ಚಿನ್ನ, 16 ಬೆಳ್ಳಿ ಮತ್ತು 14 ಕಂಚಿನ ಪದಕಗಳೊಂದಿಗೆ ಒಟ್ಟು 43 ಪದಕಗಳನ್ನು ಗಳಿಸಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
ಮಾನವಿ ವರ್ಮಾ 50 ಮೀಟರ್ ಬ್ರೆಸ್ಟ್ಸ್ಟ್ರೋಕ್ನಲ್ಲಿ 34.51 ಸೆಕೆಂಡುಗಳಲ್ಲಿ ಮತ್ತು ತಾನ್ಯಾ ಷಡಕ್ಷರಿ 200 ಮೀಟರ್ ಮೆಡ್ಲೆ ಸ್ಪರ್ಧೆಯಲ್ಲಿ 2 ನಿಮಿಷ 27.73 ಸೆಕೆಂಡುಗಳಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.