
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರು ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಇಡಿ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.
ಈ ಪ್ರಕರಣದಲ್ಲಿ ನಾಗೇಂದ್ರ ಅವರು ಈಗಾಗಲೇ 3 ತಿಂಗಳ ಕಾಲ ಜೈಲುವಾಸ ಅನುಭವಿಸಿದ್ದು, ನಂತರ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದರು.
ಇಡಿ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್‌ಶೀಟ್ ಸಲ್ಲಿಸಿದ್ದು, ಹೆಚ್ಚಿನ ಮಾಹಿತಿ ಪಡೆಯಲು ನಾಗೇಂದ್ರ ಅವರಿಗೆ ಸಮನ್ಸ್ ನೀಡಲಾಗಿತ್ತು.