
ಕೇಂದ್ರ ಸರ್ಕಾರ ರಚಿಸಿರುವ ಜಂಟಿ ಸಮಿತಿಯ ಮೊದಲ ಸಭೆಯು ವಿಜಯದಶಮಿ ದಿನದಂದು ನವದೆಹಲಿಯಲ್ಲಿ ನೀತಿ ಆಯೋಗದ ಮಾಜಿ ಸದಸ್ಯ ಪ್ರೊ. ರಮೇಶ್ ಚಂದ್ರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಕ್ಕರೆ ವಲಯದ ಸಮಸ್ಯೆಗಳು ಹಾಗೂ ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ರಾಜ್ಯ ಸರ್ಕಾರಗಳು, ಕಾರ್ಖಾನೆಗಳು ಮತ್ತು ಕೃಷಿ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಲು ಸಮಿತಿ ನಿರ್ಧರಿಸಿದೆ.
ವೈಜ್ಞಾನಿಕ ಸಲಹೆ-ಸೂಚನೆಗಳನ್ನು ಸ್ವೀಕರಿಸಿ ಸಕ್ಕರೆ ವಲಯದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿಗೆ ಹೊಸ ಮಾರ್ಗಸೂಚಿಯನ್ನು ವರದಿಯಲ್ಲಿ ರೂಪಿಸುವ ನಿರೀಕ್ಷೆಯಿದೆ.