
ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ಜಿಶಾನ್ ಎಂಬಾತನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಮಧ್ಯರಾತ್ರಿ 12.50ರ ಸುಮಾರಿಗೆ ನಡೆದ ಘಟನೆಯಲ್ಲಿ, ಆರೋಪಿಯು ಪಿಎಸ್ಐ ಸಚಿನ್ ಮತ್ತು ಸಿಬ್ಬಂದಿ ಸಂದೀಪ್ ಕಾಂಬ್ಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ.
ಆತ್ಮರಕ್ಷಣೆಗಾಗಿ ಪಿಎಸ್ಐ ಸಚಿನ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದು, ಗಾಯಗೊಂಡ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಯನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.