
ರಾಜ್ಯದ ಪಡಿತರ ಚೀಟಿದಾರರು ಸೆಪ್ಟೆಂಬರ್ 30ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸರ್ಕಾರ ಸೂಚಿಸಿದೆ.
ಫಲಾನುಭವಿಗಳು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್ ಮತ್ತು ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯೊಂದಿಗೆ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಬೆರಳಚ್ಚು ನೀಡಬಹುದು.
ನಕಲಿ ಕಾರ್ಡ್ಗಳನ್ನು ಪತ್ತೆಹಚ್ಚಲು ಮತ್ತು ಅರ್ಹರಿಗೆ ನೇರ ನಗದು ವರ್ಗಾವಣೆ ಸೌಲಭ್ಯ ಕಲ್ಪಿಸಲು ಈ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಒಟಿಪಿ ಕೇಳುವ ವಂಚಕರ ಬಗ್ಗೆ ಎಚ್ಚರದಿಂದಿರಲು ಸೂಚಿಸಲಾಗಿದೆ.