
ಬೇಡ್ತಿ ಮತ್ತು ಅಘನಾಶಿನಿ ನದಿ ತಿರುವು ಯೋಜನೆಗಳನ್ನು ವಿರೋಧಿಸಿ ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಯಲ್ಲಾಪುರದಲ್ಲಿ ಸಾವಿರಾರು ಜನರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಯಲ್ಲಾಪುರ ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ-52ನ್ನು ನಾಲ್ಕು ಗಂಟೆಗೂ ಹೆಚ್ಚು ಕಾಲ ತಡೆದಿದ್ದು, ತುರ್ತು ಸಂಚಾರಕ್ಕಾಗಿ ಆಂಬುಲೆನ್ಸ್‌ಗಳಿಗೆ ದಾರಿ ಮಾಡಿಕೊಡಲಾಯಿತು.
ಯೋಜನೆ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಅವರಿಗೆ ಮನವಿ ಸಲ್ಲಿಸಲಾಗಿದ್ದು, 15 ದಿನಗಳಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಸಾರ್ವಜನಿಕ ಕಾರ್ಯಕ್ರಮ ಬಹಿಷ್ಕರಿಸುವ ಎಚ್ಚರಿಕೆ ನೀಡಲಾಗಿದೆ.