
ತಮಿಳು ಚಿತ್ರರಂಗದ ಸ್ಟಾರ್ ನಟ ಧನುಷ್ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ ಎಂಬ ವದಂತಿಗಳ ನಡುವೆ, ಅವರು ರಾಜಕೀಯಕ್ಕೆ ಬಂದರೆ ಸ್ನೇಹಿತನಾಗಿ ತಾವು ಖಂಡಿತ ಬೆಂಬಲಿಸುವುದಾಗಿ ಸಂಗೀತ ನಿರ್ದೇಶಕ ಜಿ.ವಿ. ಪ್ರಕಾಶ್ ಕುಮಾರ್ ಹೇಳಿದ್ದಾರೆ.
ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜಿ.ವಿ. ಪ್ರಕಾಶ್ ಕುಮಾರ್, ಧನುಷ್ ತಮ್ಮ ಅತ್ಯಂತ ಆಪ್ತ ಗೆಳೆಯನಾಗಿದ್ದು, ಅವರು ತೆಗೆದುಕೊಳ್ಳುವ ಯಾವುದೇ ರಾಜಕೀಯ ನಿರ್ಧಾರಕ್ಕೆ ತಮ್ಮ ಸಹಮತ ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸದ್ಯ ಧನುಷ್ ಅವರು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ಕರೀನಾ ಕಪೂರ್ ಖಾನ್ ನಾಯಕಿಯಾಗಿ ನಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.