Indian Politics
ಕರ್ನಾಟಕ ಹೈಕೋರ್ಟ್‌ಗೆ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ಕರ್ನಾಟಕ ಹೈಕೋರ್ಟ್‌ಗೆ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

prajavani1h
THE BRIEF
1

ಕರ್ನಾಟಕ ಹೈಕೋರ್ಟ್‌ಗೆ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

2

ರಾಘವೇಂದ್ರ ಸೀತಾರಾಮ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೆ ಗೌಡ ಶಾಂತಿ ಭೂಷಣ್ ಅವರು ಈ ಹುದ್ದೆಗೆ ನೇಮಕಗೊಂಡಿದ್ದಾರೆ.

3

ಸಂವಿಧಾನದ 224(1)ನೇ ವಿಧಿಯಡಿ ಈ ನೇಮಕ ಮಾಡಲಾಗಿದ್ದು, ಅಧಿಕಾರ ಸ್ವೀಕರಿಸಿದ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿಗೆ ಇವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.