
ಮಳವಳ್ಳಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ಈ ಶಿಬಿರವು ಆರಂಭವಾಗಲಿದೆ.
ಇನ್ಸೈಟ್ ಸಂಸ್ಥೆಯ ಮಾರ್ಗದರ್ಶನದಲ್ಲಿ ನಡೆಯುವ ಈ ಶಿಬಿರದಲ್ಲಿ ಐಎಎಸ್, ಕೆಎಎಸ್, ವಿಎಒ ಮತ್ತು ಪಿಡಿಒ ಸೇರಿದಂತೆ ವಿವಿಧ ಪರೀಕ್ಷೆಗಳ ಬಗ್ಗೆ ನುರಿತವರಿಂದ ಮಾರ್ಗದರ್ಶನ ಸಿಗಲಿದೆ.