International
ಮುಕ್ತ ವ್ಯಾಪಾರ ಒಪ್ಪಂದಗಳ ಪರಿಣಾಮಕಾರಿ ಬಳಕೆಗೆ ಕೇಂದ್ರದಿಂದ ಕಾರ್ಯಕ್ರಮ

ಮುಕ್ತ ವ್ಯಾಪಾರ ಒಪ್ಪಂದಗಳ ಪರಿಣಾಮಕಾರಿ ಬಳಕೆಗೆ ಕೇಂದ್ರದಿಂದ ಕಾರ್ಯಕ್ರಮ

prajavani2h
THE BRIEF
1

ವಿವಿಧ ದೇಶಗಳ ಜೊತೆ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಪರಿಣಾಮಕಾರಿ ಬಳಕೆಯನ್ನು ಖಾತರಿಪಡಿಸುವ ಉದ್ದೇಶದಿಂದ ಕೇಂದ್ರ ವಾಣಿಜ್ಯ ಸಚಿವಾಲಯವು ದೇಶದ ಹಲವೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಿದೆ.

2

ಈ ಒಪ್ಪಂದಗಳ ಪ್ರಯೋಜನವು ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು ಎಂಎಸ್‌ಎಂಇ ಉದ್ದಿಮೆಗಳಿಗೆ ದಕ್ಕಬೇಕು ಎಂಬುದಕ್ಕೆ ಆದ್ಯತೆ ನೀಡಲಾಗಿದೆ ಎಂದು ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ತಿಳಿಸಿದ್ದಾರೆ.

3

ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರವು ಯುಎಇ, ಮಾರಿಷಸ್, ಆಸ್ಟ್ರೇಲಿಯಾ, ಒಮಾನ್, ಇಎಫ್‌ಟಿಎ, ಬ್ರಿಟನ್ ಮತ್ತು ನ್ಯೂಜಿಲೆಂಡ್‌ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.