Entertainment
ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

tv9kannada2h
THE BRIEF
1

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪಟ್ಟೆ ತಲೆ ಹೆಬ್ಬಾತುಗಳನ್ನು ಸಾಕಿದ ಆರೋಪದ ಮೇಲೆ ಟಿ. ನರಸೀಪುರ ನ್ಯಾಯಾಲಯ ನೀಡಿದ್ದ ಸಮನ್ಸ್ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

2

2023ರ ಜನವರಿ 21ರಂದು ಅರಣ್ಯಾಧಿಕಾರಿಗಳು ದಾಳಿ ನಡೆಸಿದಾಗ ಫಾರ್ಮ್‌ಹೌಸ್‌ನಲ್ಲಿ 4 ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾಗಿದ್ದವು, ಈ ಹಿನ್ನೆಲೆಯಲ್ಲಿ ದರ್ಶನ್, ವಿಜಯಲಕ್ಷ್ಮೀ ಮತ್ತು ನಾಗರಾಜ್ ವಿರುದ್ಧ ದೂರು ದಾಖಲಾಗಿತ್ತು.

3

ತಮ್ಮ ಫಾರ್ಮ್‌ಹೌಸ್‌ನಲ್ಲಿ ಪಕ್ಷಿಗಳು ತಾವಾಗಿಯೇ ಬಂದು ಸೇರಿಕೊಂಡಿವೆ ಮತ್ತು ತಾವು ಅವುಗಳನ್ನು ಸಾಕಿಲ್ಲ ಎಂದು ದರ್ಶನ್ ಮತ್ತು ತಂಡ ಅರ್ಜಿಯಲ್ಲಿ ಸ್ಪಷ್ಟನೆ ನೀಡಿದೆ.