
ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆಗಳು ಮತ್ತು ಅಂಡರ್ಪಾಸ್ಗಳಲ್ಲಿ 2ರಿಂದ 3 ಅಡಿಗಳಷ್ಟು ನೀರು ನಿಂತು ಜನಜೀವನ ಅಸ್ತವ್ಯಸ್ತಗೊಂಡಿದೆ.
ನೋಯ್ಡಾ, ಗುರುಗ್ರಾಮ ಮತ್ತು ಘಾಜಿಯಾಬಾದ್ನ ಹಲವು ರಸ್ತೆಗಳಲ್ಲಿ ವಾಹನಗಳು ಕೆಟ್ಟು ನಿಂತಿದ್ದು, ಸುದೀರ್ಘ ಸಂಚಾರ ದಟ್ಟಣೆ ಉಂಟಾಗಿದೆ.
ಜಲಾವೃತಗೊಂಡ ರಸ್ತೆಗಳನ್ನು ಮಕ್ಕಳು ಈಜುಕೊಳದಂತೆ ಬಳಸಿಕೊಂಡು ಆಟವಾಡುತ್ತಾ ಸಂಭ್ರಮಿಸಿದ ದೃಶ್ಯಗಳು ಕಂಡುಬಂದಿದ್ದು, ವಾಹನ ಸವಾರರು ಪರದಾಡುವಂತಾಯಿತು.