Health & Environment
ಕರ್ನಾಟಕದಲ್ಲಿ ಮಳೆ ಕೊರತೆ: 134 ತಾಲೂಕುಗಳು ಬರಪೀಡಿತ ಎಂದು ಘೋಷಣೆ

ಕರ್ನಾಟಕದಲ್ಲಿ ಮಳೆ ಕೊರತೆ: 134 ತಾಲೂಕುಗಳು ಬರಪೀಡಿತ ಎಂದು ಘೋಷಣೆ

oneindia2h
THE BRIEF
1

ಜೂನ್ 1ರಿಂದ ಆಗಸ್ಟ್ 26ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ. 30ರಷ್ಟು ಮಳೆ ಕೊರತೆಯಾಗಿದ್ದು, 134 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

2

ರಾಜ್ಯದಲ್ಲಿ 84.10 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯ ಪೈಕಿ ಕೇವಲ 60 ಲಕ್ಷ ಹೆಕ್ಟೇರ್ (ಶೇ. 71) ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, 151 ಲಕ್ಷ ಟನ್ ಮೇವಿನ ಅಭಾವದ ಭೀತಿಯಿದೆ.

3

ರೈತರ ಬೆಳೆ ನಷ್ಟ ಪರಿಹಾರಕ್ಕಾಗಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದ್ದು, ಕುಡಿಯುವ ನೀರಿಗಾಗಿ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ.