
ಕೋಲಾರ ತಾಲೂಕಿನ ಮದನಹಳ್ಳಿ ಗ್ರಾಮದಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ನವೀನ್ ಹಾಗೂ ಮಾನಸಾ ಅವರ ಕುಟುಂಬಸ್ಥರ ಮೇಲೆ ಯುವತಿ ಕಡೆಯವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಅಕ್ಟೋಬರ್ 15 ರಂದು ಆರಕ್ಷತೆ ನಿಶ್ಚಯವಾಗಿದ್ದ ಹಿನ್ನೆಲೆಯಲ್ಲಿ ಈ ಗಲಾಜೆ ನಡೆದಿದ್ದು, ವರನ ತಂದೆ, ಚಿಕ್ಕಪ್ಪ ಹಾಗೂ ಅಣ್ಣ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.