
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ, ಅಕ್ರಮವಾಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಮತ್ತು ನರ್ಸ್ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಟಗೇರಿ ನಿವಾಸಿಗಳಾದ ಸಿಕಂದರ್ ಬೇಪಾರಿ, ಶಬ್ಬೀರಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್ ಮತ್ತು ಭರತ ಕೊರವರ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಕ್ರಮ ಗರ್ಭಪಾತಕ್ಕೆ ಸಹಕರಿಸಿದ ಆರೋಪದ ಮೇಲೆ ಅನ್ವರ್ ಬಾಗೇವಾಡಿ, ಅಲ್ತಾಫ್ ಕೊಪ್ಪಳ ಮತ್ತು ಬಿಲಾಲ್ ಗೋಕಾವಿ ವಿರುದ್ಧವೂ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಎಸ್ಪಿ ರೋಹನ್ ಜಗದೀಶ್ ತಿಳಿಸಿದ್ದಾರೆ.