
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 2026ರ ರಾಜ್ಯಮಟ್ಟದ ಕ್ರೀಡಾಕೂಟದ 16 ವರ್ಷದೊಳಗಿನವರ ಲಾಂಗ್ ಜಂಪ್ ವಿಭಾಗದಲ್ಲಿ ಮೈಸೂರಿನ ಯುಕ್ತಿ ಕೆ. ಚಿನ್ನದ ಪದಕ ಗೆದ್ದಿದ್ದಾರೆ.
ಯುಕ್ತಿ ಕೆ. ಅವರು ಹೊಸ 'ಮೀಟ್ ದಾಖಲೆ' ನಿರ್ಮಿಸುವ ಮೂಲಕ ಈ ಸಾಧನೆ ಮಾಡಿದ್ದು, ಕೋಚ್ ಪ್ರಭಾಕರ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಇತ್ತೀಚೆಗೆ ಸ್ಕಾಟ್ಲ್ಯಾಂಡ್ನ ಗ್ಲ್ಯಾಸ್ಗೋದಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮೈಸೂರಿನ ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪಾ 7.26 ಮೀಟರ್ ದೂರ ಗುಂಡು ಎಸೆದು ಕಂಚಿನ ಪದಕ ಗೆದ್ದಿದ್ದರು.