
ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಲೂಟಿ ಹೊಡೆದ ಹಣದಿಂದಲೇ ರೈತರ ಸಾಲಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು ಮತ್ತು ಮೇವಿನ ವ್ಯವಸ್ಥೆ ಮಾಡುವಲ್ಲಿ ಹಾಗೂ ರೈತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಜಿಲ್ಲೆಗಳಿಗೆ ತೆರಳಿ ಸಂಪುಟ ಸಭೆ ನಡೆಸುವುದು ಸರ್ಕಾರದ ಪ್ರಚಾರದ ಸ್ಟಂಟ್ ಆಗಿದ್ದು, ಸಾರ್ವಜನಿಕರ ಹಣ ಪೋಲಾಗುತ್ತಿದೆ ಎಂದು ಟೀಕಿಸಿದ್ದಾರೆ.