
2010ರ ಕೊಲೆ ಯತ್ನ ಪ್ರಕರಣದಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಸೇರಿದಂತೆ ಐವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿರ್ದೋಷಿಗಳು ಎಂದು ತೀರ್ಪು ನೀಡಿದೆ.
ಶಾಸಕ ಸಂಗಮೇಶ್, ಅವರ ಸೋದರರು ಮತ್ತು ಮಕ್ಕಳ ಮೇಲಿದ್ದ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆಯಿಂದ ಕೋರ್ಟ್ ಖುಲಾಸೆಗೊಳಿಸಿದೆ.
ಹಳದಮ್ಮ ದೇವಸ್ಥಾನ ಉದ್ಘಾಟನೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಾಗಿತ್ತು.