
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ನಿಂತುಹೋಗಿದ್ದು, ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮುಂಗಾರು (ಹಿಂಗಾರು) ಆರಂಭವಾಗಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಂದು ಗುಡುಗು, ಮಿಂಚು ಸಹಿತ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ರಾಯಚೂರು, ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.