
ಪ್ರಸಕ್ತ ಹಣಕಾಸು ವರ್ಷದ ಮೊದಲ 5 ತಿಂಗಳಲ್ಲಿ ಮಾರುತಿ ಸುಜುಕಿ 11,43,365 ವಾಹನಗಳನ್ನು ಮಾರಾಟ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ.
ಆಗಸ್ಟ್ ತಿಂಗಳಲ್ಲಿ ಮಾರುತಿ ಸುಜುಕಿ 2,19,220 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 21 ರಷ್ಟು ಬೆಳವಣಿಗೆ ದಾಖಲಿಸಿದೆ.
ಟಾಟಾ ಮೋಟಾರ್ಸ್ ಶೇ. 56 ರಷ್ಟು ಬೆಳವಣಿಗೆಯೊಂದಿಗೆ 67,753 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, ಹ್ಯೂಂಡೈ ಮೋಟಾರ್ ಇಂಡಿಯಾ 65,796 ಯುನಿಟ್‌ಗಳ ಮಾರಾಟದೊಂದಿಗೆ ಸಾರ್ವಕಾಲಿಕ ದಾಖಲೆ ಬರೆದಿದೆ.