
ತಂದೆ ಸಿದ್ದರಾಮಯ್ಯ ಅವರು ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಕೇಳಿದ್ದರೂ, ಹೈಕಮಾಂಡ್ ದಲಿತ ಬಲಗೈಯಲ್ಲಿ ಹೊಸ ಮುಖಕ್ಕೆ ಅವಕಾಶ ನೀಡಲು ಪಿ.ಎಂ. ನರೇಂದ್ರಸ್ವಾಮಿ ಅವರನ್ನು ಆಯ್ಕೆ ಮಾಡಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದರು.
ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ತಪ್ಪಿದ ಹಿಂದೆ ಸಿದ್ದರಾಮಯ್ಯ ಅವರ ಕೈವಾಡವೇನಿಲ್ಲ ಎಂದು ಯತೀಂದ್ರ ಸ್ಪಷ್ಟಪಡಿಸಿದ್ದು, ಈ ಸಚಿವ ಸಂಪುಟದ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನವಿಲ್ಲ ಎಂದರು.
ತಂದೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಕಾರಣದಿಂದ ತನಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಯತೀಂದ್ರ ಹೇಳಿದ್ದು, ಹಿರಿಯರಾದ ಮಹದೇವಪ್ಪ ಹಾಗೂ ತನ್ವೀರ್ ಸೇಠ್ ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ತಿಳಿಸಿದರು.