
ತುಮಕೂರಿನಲ್ಲಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನೀತಿಯ ಪ್ರಕಾರ, ಹಾಲಿ ಇರುವ ವಿಮಾನ ನಿಲ್ದಾಣದಿಂದ 150 ಕಿ.ಮೀ ವ್ಯಾಪ್ತಿಯಲ್ಲಿ ಹೊಸ ನಿಲ್ದಾಣಕ್ಕೆ ಸಾಮಾನ್ಯವಾಗಿ ಅನುಮತಿ ನೀಡಲಾಗುವುದಿಲ್ಲ.
ಯೋಜನೆಯೇ ಇಲ್ಲದಿರುವುದರಿಂದ ಮುಂಬರುವ ಬಜೆಟ್ನಲ್ಲಿ ತುಮಕೂರು ವಿಮಾನ ನಿಲ್ದಾಣಕ್ಕೆ ಅನುದಾನ ಕಾಯ್ದಿರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವರು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.