
ಉಕ್ರೇನ್ ರಾಜಧಾನಿ ಕೈವ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ರಷ್ಯಾ ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಯಲ್ಲಿ 3 ವರ್ಷದ ಮಗು ಸೇರಿದಂತೆ ಒಟ್ಟು 4 ಜನರು ಮೃತಪಟ್ಟಿದ್ದಾರೆ.
ಬ್ರೋವರಿ ಜಿಲ್ಲೆಯಲ್ಲಿ ರಷ್ಯಾದ ಡ್ರೋನ್ ದಾಳಿಯಿಂದ ಮನೆಯೊಂದು ಸಂಪೂರ್ಣ ಧ್ವಂಸವಾಗಿದ್ದು, ಅಜ್ಜ, ಅಜ್ಜಿ ಮತ್ತು ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಚೆರ್ನಿಹಿವ್ ಪ್ರದೇಶದ ಗೋದಾಮೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಮೆರಿಕದ ಸೆನೆಟ್ ರಷ್ಯಾದ ಮೇಲೆ ಹೊಸ ನಿರ್ಬಂಧಗಳನ್ನು ವಿಧಿಸುವ ಮಸೂದೆಯನ್ನು ಅಂಗೀಕರಿಸಿದ್ದು, ಮಾಸ್ಕೋದಿಂದ ತೈಲ ಮತ್ತು ಅನಿಲ ಖರೀದಿಸುವ ದೇಶಗಳಿಗೆ ಶಿಕ್ಷೆ ವಿಧಿಸುವ ಉದ್ದೇಶ ಹೊಂದಿದೆ.