
ಹೈದರಾಬಾದ್ನಲ್ಲಿ ನಡೆದ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಅತಿರೇಕದ ವರ್ತನೆಯಿಂದ ಸೌಂಡ್ ಬಾಕ್ಸ್ ಬಿದ್ದು ನಾಲ್ವರಿಗೆ ಗಾಯವಾಗಿದೆ.
ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಲ್ಲಾ ರೆಡ್ಡಿ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಮತ್ತು ಇವೆಂಟ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಯಶ್ ಮತ್ತು ಚಿತ್ರತಂಡದ ಸದಸ್ಯರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದ್ದು, ಈ ಕುರಿತ ವಿಡಿಯೋಗಳು ಲಭ್ಯವಾಗಿವೆ.