
ನಕಲಿ ಗ್ಯಾಸ್ ಸಂಪರ್ಕಗಳನ್ನು ತಡೆಗಟ್ಟಲು ಮತ್ತು ಅರ್ಹರಿಗೆ ಸಬ್ಸಿಡಿ ತಲುಪಿಸಲು ಕೇಂದ್ರ ಸರ್ಕಾರವು ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿದ್ದು, ಆಗಸ್ಟ್ 31 ಕೊನೆಯ ದಿನಾಂಕವಾಗಿದೆ.
ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ, ಗ್ರಾಹಕರ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಜಮೆಯಾಗುವುದು ಸ್ಥಗಿತಗೊಳ್ಳಬಹುದು ಮತ್ತು ಮುಂದಿನ ದಿನಗಳಲ್ಲಿ ಸಿಲಿಂಡರ್ ಬುಕಿಂಗ್ ಮಾಡುವಾಗ ಸಮಸ್ಯೆ ಎದುರಾಗಬಹುದು.
ಗ್ರಾಹಕರು ಗ್ಯಾಸ್ ಏಜೆನ್ಸಿ ಕಚೇರಿಗೆ ಹೋಗುವ ಬದಲು ಆಧಾರ್ ಫೇಸ್ ಆರ್‌ಡಿ ಆ್ಯಪ್ ಮತ್ತು ಆಯಾ ಗ್ಯಾಸ್ ಕಂಪನಿಯ ಅಧಿಕೃತ ಆ್ಯಪ್‌ಗಳನ್ನು ಬಳಸಿಕೊಂಡು ಮೊಬೈಲ್ ಮೂಲಕವೇ ಉಚಿತವಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು.