
ಕೊಲಂಬೊದಲ್ಲಿ ನಡೆಯುತ್ತಿರುವ 3 ದಿನಗಳ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ಇಲೆವೆನ್ ತಂಡವು ಭಾರತಕ್ಕೆ ಗೆಲ್ಲಲು 207 ರನ್ ಗುರಿ ನೀಡಿದೆ.
ಎರಡನೇ ಇನ್ನಿಂಗ್ಸ್ನಲ್ಲಿ ಶ್ರೀಲಂಕಾ 45 ಓವರ್ಗಳಲ್ಲಿ 200 ರನ್ ಗಳಿಸಿದ್ದು, ನಿಶಾನ್ ಮಧುಷ್ಕ 63 ರನ್ ಗಳಿಸಿ ರಿಟೈರ್ಡ್ ಹರ್ಟ್ ಆಗಿದ್ದಾರೆ.
ಭಾರತದ ಪರ ಬೌಲಿಂಗ್ನಲ್ಲಿ ರವೀಂದ್ರ ಜಡೇಜಾ ಮತ್ತು ಗುರ್ನೂರ್ ಬ್ರಾರ್ ತಲಾ 2 ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ.