
ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಮಾದಕ ವ್ಯಸನದ ವಿರುದ್ಧ 'ಬೇಡ ಬ್ರೋ & ರೈಸ್' ಅಭಿಯಾನದಡಿ ಶಾಲಾ-ಕಾಲೇಜುಗಳ ಸುತ್ತಮುತ್ತಲಿನ 575 ವಾಣಿಜ್ಯ ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ಪರಿಶೀಲನೆ ವೇಳೆ 4 ಎನ್ಡಿಪಿಎಸ್ ಪ್ರಕರಣಗಳು, 282 ಕೊಕ್ಟಾ ಕೇಸ್ಗಳು ದಾಖಲಾಗಿದ್ದು, 305 ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿ 27 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಯುವಜನತೆಯಲ್ಲಿ ಜಾಗೃತಿ ಮೂಡಿಸಲು ಪೊಲೀಸರು 125 ಶೈಕ್ಷಣಿಕ ಸಂಸ್ಥೆಗಳೊಂದಿಗೆ ಸಭೆ ನಡೆಸಿದ್ದು, ಮಾದಕ ವಸ್ತುಗಳ ಮಾರಾಟ ತಡೆಯಲು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.