
ವಾಲ್ಮೀಕಿ ನಿಗಮದ ಹಗರಣದಲ್ಲಿ ಇ.ಡಿ ತನಿಖೆ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರು ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಜುಲೈ 15 ಮತ್ತು ಜುಲೈ 26ರಂದು ನಾಗೇಂದ್ರ ಅವರು ದೆಹಲಿಗೆ ಪ್ರಯಾಣಿಸಿದ್ದಾರೆ ಎಂದು ಆರೋಪಿಸಿರುವ ಅಶೋಕ್, ಈ ಕುರಿತು ಇ.ಡಿ ವಿಮಾನ ನಿಲ್ದಾಣದ ದಾಖಲೆಗಳನ್ನು ಪರಿಶೀಲಿಸುತ್ತಿದೆ ಎಂದು ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶ ಉಲ್ಲಂಘಿಸಿರುವ ಸಚಿವ ನಾಗೇಂದ್ರ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕೆಂದು ಆರ್. ಅಶೋಕ್ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.