
ಕರ್ನಾಟಕದಲ್ಲಿ ಕಳಪೆ ಆಹಾರ ಪೂರೈಸುವ ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದ್ದು, ನಿಯಮ ಉಲ್ಲಂಘಿಸುವವರಿಗೆ 5 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲಾಗುವುದು.
ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆಯು ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಪರಿಚಯಿಸಿದ್ದು, ಗ್ರಾಹಕರು ಹೋಟೆಲ್ ಮತ್ತು ಮೆಡಿಕಲ್ ಸ್ಟೋರ್‌ಗಳ ವಿರುದ್ಧ ಸ್ಥಳದಲ್ಲೇ ದೂರು ದಾಖಲಿಸಬಹುದು.
ಈ ತಂತ್ರಜ್ಞಾನ ಆಧಾರಿತ ದೂರು ವ್ಯವಸ್ಥೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಮುಂದಿನ ದಿನಗಳಲ್ಲಿ ಪಿಜಿಗಳು, ಹಾಸ್ಟೆಲ್‌ಗಳು ಮತ್ತು ರೈಲ್ವೆ ಕ್ಯಾಂಟೀನ್‌ಗಳಲ್ಲೂ ತಪಾಸಣೆ ವಿಸ್ತರಿಸಲಾಗುವುದು.