
ಇಂಡಿಯನ್ ಓವರ್ಸೀಸ್ ಬ್ಯಾಂಕ್ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 291 ಸ್ಪೆಷಲಿಸ್ಟ್ ಮತ್ತು ಜನರಲಿಸ್ಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಆಯ್ಕೆಯಾದವರಿಗೆ ರೂ. 48,480 ರಿಂದ ರೂ. 1,05,280 ರವರೆಗೆ ಮೂಲ ವೇತನ ಸಿಗಲಿದೆ.
ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದ್ದು, ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಡಿತಗೊಳಿಸಲಾಗುತ್ತದೆ.