
ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 40 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಈ ಮೂಲಕ ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ 217ಕ್ಕೆ ತಲುಪಿದೆ.
ಗದಗ, ಮುಂಡರಗಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ಮಡಿಕೇರಿ ಸೇರಿದಂತೆ ವಿವಿಧ ಜಿಲ್ಲೆಗಳ ತಾಲೂಕುಗಳು ಈ ಹೊಸ ಪಟ್ಟಿಯಲ್ಲಿ ಸೇರ್ಪಡೆಗೊಂಡಿವೆ.
ಸ್ಥಳ ಪರಿಶೀಲನೆ ಹಾಗೂ ಕೆಎಸ್ಎನ್ಡಿಎಂಸಿ ಸಲ್ಲಿಸಿದ ವರದಿಯ ಆಧಾರದ ಮೇಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಈ ಹಿಂದೆ 177 ತಾಲೂಕುಗಳನ್ನು ಘೋಷಿಸಲಾಗಿತ್ತು.