ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಪಡೆಗಳು ನಡೆಸಿದ ದಮನಕಾರಿ ಕಾರ್ಯಾಚರಣೆಯಲ್ಲಿ ಕಳೆದ ಎರಡು ದಿನಗಳಲ್ಲಿ ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ.
ಪ್ರತಿಭಟನಾಕಾರರನ್ನು ಭಾರತದಂತೆಯೇ ಶತ್ರುಗಳೆಂದು ಪರಿಗಣಿಸುತ್ತೇನೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸೀಫ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜೂನ್ 5 ರಿಂದ ಪಿಒಕೆಯಲ್ಲಿ ನಡೆಯುತ್ತಿರುವ ಅಶಾಂತಿಯಲ್ಲಿ ಇದುವರೆಗೆ 90ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಜೆಎಎಸಿ ಕಾರ್ಯಕರ್ತ ಉಸ್ಮಾನ್ ನಜೀರ್ ಕೂಡ ಮೃತಪಟ್ಟವರಲ್ಲಿ ಸೇರಿದ್ದಾರೆ.