
ಮ್ಯಾಟ್ರಿಮೋನಿಯಲ್ ಪೋರ್ಟಲ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ, ತಾನು ಜರ್ಮನಿಯ ನೇತ್ರ ತಜ್ಞ ಎಂದು ನಂಬಿಸಿ ಬೆಂಗಳೂರಿನ ವೈದ್ಯೆಯೊಬ್ಬರಿಂದ 22.2 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿದ್ದಾನೆ.
2026ರ ಜನವರಿ 9ರಿಂದ 24ರವರೆಗೆ ಆರೋಪಿಯ ಸೂಚನೆಯಂತೆ ವೈದ್ಯೆ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿದ್ದು, ಆಸ್ಪತ್ರೆ ನಿರ್ಮಾಣದ ನೆಪದಲ್ಲಿ ಈ ವಂಚನೆ ನಡೆದಿದೆ ಎಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ.
ಆರೋಪಿ ತನ್ನ ಅಂತಾರಾಷ್ಟ್ರೀಯ ಬ್ಯಾಂಕ್ ಖಾತೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸುಳ್ಳು ಹೇಳಿ ಹಣ ಪಡೆದಿದ್ದು, ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ವೈದ್ಯೆಗೆ ತಾನು ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದಿದೆ.