
ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಧಾರವಾಡ, ಗದಗ, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಬಾಗಲಕೋಟೆ, ಬೆಳಗಾವಿ, ಕಲಬುರಗಿ ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.