
ರಾಜ್ಯಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ವಿಧೇಯಕದ ಚರ್ಚೆಯ ವೇಳೆ, ಜುಲೈ 20ರ 'ಚಲೋ ಸಂಸತ್' ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಕುರಿತು ಗೃಹ ಸಚಿವ ಅಮಿತ್ ಶಾ ಮೌನವನ್ನು ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆಯಿಂದ ವಿದ್ಯಾರ್ಥಿಗಳು ಕಣ್ಣು, ಕಿವಿ ಮತ್ತು ಕೈಗಳನ್ನು ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ ಖರ್ಗೆ, ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಸದನಕ್ಕೆ ಬಂದು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.
ಸರ್ಕಾರ ತಂದಿರುವ ಹೊಸ ಕಾನೂನಿನಿಂದ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಟೀಕಿಸಿದ ಖರ್ಗೆ, ಆರ್ಎಸ್ಎಸ್ ಜೊತೆ ಗುರುತಿಸಿಕೊಂಡಿರುವ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಒತ್ತಾಯಿಸಿದರು.