
ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರು 2027ರ ಏಕದಿನ ವಿಶ್ವಕಪ್ಗಾಗಿ ಶುಭ್ಮನ್ ಗಿಲ್ ನಾಯಕತ್ವದ 15 ಸದಸ್ಯರ ಸಂಭಾವ್ಯ ಭಾರತೀಯ ತಂಡವನ್ನು ಪ್ರಕಟಿಸಿದ್ದಾರೆ.
ಈ ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಭುವನೇಶ್ವರ ಕುಮಾರ್ ಅವರಂತಹ ಅನುಭವಿ ಆಟಗಾರರಿಗೆ ಕಾರ್ತಿಕ್ ಮಣೆ ಹಾಕಿದ್ದಾರೆ.
ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಭುವನೇಶ್ವರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದ್ದು, ತಂಡವು ಸಮತೋಲಿತವಾಗಿದೆ ಎಂದು ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ.