
ದೇಶಾದ್ಯಂತ ನೈಋತ್ಯ ಮುಂಗಾರು ಅಕ್ಟೋಬರ್ 15ರಂದು ಸಂಪೂರ್ಣವಾಗಿ ಹಿಮ್ಮೆಟ್ಟಿದ್ದು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಈಶಾನ್ಯ ಮುಂಗಾರು ಮಳೆ ಪ್ರಾರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ತಮಿಳುನಾಡು ಕರಾವಳಿ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದ ಮೇಲಿನ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತದ ಪಟ್ಟಿಯಿಂದಾಗಿ ಈ ಮಳೆ ಚಟುವಟಿಕೆಗಳು ಮುಂದುವರಿದಿವೆ.
ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಅಕ್ಟೋಬರ್ 20ರವರೆಗೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.