
ಕೆಪಿಎಸ್‌ಸಿ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳಿಗೆ, ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆಯ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಪ್ರಭಾವಿ ರಾಜಕೀಯ ವ್ಯಕ್ತಿಗಳ ಸಂಪರ್ಕ ಸಂಖ್ಯೆಗಳು ಲಭ್ಯವಾಗಿವೆ.
ಬೀದರ್‌ನ ಭಾಲ್ಕಿ ತಾಲೂಕಿನವನಾದ ಕನ್ನಾಳೆ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯನಾಗಿದ್ದು, ಈತ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ಅಕ್ರಮ ಎಸಗಿರುವ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.
ಸಿಐಡಿ ಅಧಿಕಾರಿಗಳು ಕನ್ನಾಳೆಯ ಕರೆಗಳ ವಿವರಗಳನ್ನು ಪರಿಶೀಲಿಸುತ್ತಿದ್ದು, ಆತನ ಜಾಲದಲ್ಲಿದ್ದ ಪ್ರಭಾವಿಗಳು ಹಾಗೂ ಅಕ್ರಮದ ಫಲಾನುಭವಿಗಳ ಪತ್ತೆಗೆ ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ.