
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ತಾತಹಳ್ಳಿಯಲ್ಲಿ ಪತ್ನಿ ಪದ್ಮಾ ಅವರನ್ನು ಗೋಡಂಬಿ ತೋಟಕ್ಕೆ ಕರೆದೊಯ್ದು ಪತಿ ಚಂದ್ರಶೇಖರ್ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.
ಘಟನೆಯ ಬಳಿಕ ಆರೋಪಿ ಚಂದ್ರಶೇಖರ್ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಚಂದ್ರಶೇಖರ್‌ಗೆ ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದ್ದು, ಅದನ್ನು ಪತ್ನಿ ಪ್ರಶ್ನಿಸುತ್ತಿದ್ದದ್ದೇ ಕೃತ್ಯಕ್ಕೆ ಕಾರಣವೆಂದು ವಿಚಾರಣೆಯಿಂದ ತಿಳಿದುಬಂದಿದೆ.