
ಕರ್ನಾಟಕದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ನೀಡುವ ಬಿಲ್ನಲ್ಲಿ ಔಷಧಗಳ ಖರೀದಿ ಬೆಲೆ ಹಾಗೂ ಗರಿಷ್ಠ ಚಿಲ್ಲರೆ ಬೆಲೆ (MRP) ಎರಡನ್ನೂ ನಮೂದಿಸುವುದನ್ನು ಆರೋಗ್ಯ ಇಲಾಖೆ ಕಡ್ಡಾಯಗೊಳಿಸಿದೆ.
ನವೆಂಬರ್ 1ರಿಂದ ಜಾರಿಗೆ ಬರಲಿರುವ ಈ ಹೊಸ ನಿಯಮದನ್ವಯ ಆಸ್ಪತ್ರೆಗಳು ಚಿಕಿತ್ಸೆಗಳ ಅಧಿಕೃತ ದರಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು.
ಈ ನಿಯಮಗಳು ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಟ್ರಸ್ಟ್ ಆಸ್ಪತ್ರೆಗಳಿಗೆ ಅನ್ವಯವಾಗಲಿದ್ದು, ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.