
ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಕೃಷ್ಣಾ ನದಿಯಿಂದ 40 ಟಿಎಂಸಿ ನೀರನ್ನು ಭೀಮಾ ನದಿಯ ಉಜನಿ ಜಲಾಶಯಕ್ಕೆ ಹರಿಸಲು ಯೋಜನೆ ರೂಪಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.
ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಎರಡರ ಅಧಿಸೂಚನೆ ಇನ್ನೂ ಆಗಿಲ್ಲವಾದ್ದರಿಂದ ಗೆಜೆಟ್ ನೋಟಿಫಿಕೇಷನ್‌ಗೂ ಮುನ್ನವೇ ಈ ಯೋಜನೆ ಕೈಗೊಂಡಿರುವುದು ಸಂಪೂರ್ಣ ಕಾನೂನುಬಾಹಿರ ಎಂದು ಅವರು ತಿಳಿಸಿದರು.
ಈ ಯೋಜನೆಯು ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಜೊತೆ ಚರ್ಚೆ ನಡೆಸಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಲು ನಿರ್ಧರಿಸಲಾಗಿದೆ.