ಬೆಂಗಳೂರಿನಲ್ಲಿ ನಡೆದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ 6,252 ಕೋಟಿ ರೂಪಾಯಿ ಮೌಲ್ಯದ 83 ಕೈಗಾರಿಕಾ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದ್ದು, 30 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ.
ದೊಡ್ಡಬಳ್ಳಾಪುರದಲ್ಲಿ ಜಸ್ವಿನ್ ವೆಂಚರ್ಸ್ ಮತ್ತು ಜಂಪನಾ ಕನ್ಸ್ಟ್ರಕ್ಷನ್ಸ್ ಕಂಪನಿಗಳು ಇಂಟಿಗ್ರೇಟೆಡ್ ಕೈಗಾರಿಕಾ ಪಾರ್ಕ್ ಅಭಿವೃದ್ಧಿಗೆ ಕ್ರಮವಾಗಿ 475 ಮತ್ತು 465 ಕೋಟಿ ರೂಪಾಯಿ ಹೂಡಿಕೆ ಮಾಡಲಿವೆ.
ಒಟ್ಟು 83 ಯೋಜನೆಗಳ ಪೈಕಿ 69 ಯೋಜನೆಗಳು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಸ್ಥಾಪನೆಯಾಗಲಿವೆ.