
ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನಿದ್ರೆ ಬರುತ್ತಿಲ್ಲ ಎಂದು ಸಚಿವ ಎನ್. ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ.
ಕೇಂದ್ರ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂಪಾಯಿ ನೀಡಲು ವಿಫಲವಾಗಿದೆ ಎಂದು ಆರೋಪಿಸಿದ ಸಚಿವರು, ಕುಮಾರಸ್ವಾಮಿ ಅವರು ರಾಜ್ಯದ ಅನುದಾನ ಕೊಡಿಸುವಲ್ಲಿ ಯಶಸ್ವಿಯಾಗಲಿ ಎಂದರು.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾನೂನು ಹೋರಾಟದ ಮೂಲಕ ತಮಿಳುನಾಡಿಗೆ ಹರಿಸುವ ನೀರನ್ನು 12,000 ಕ್ಯೂಸೆಕ್ಸ್‌ನಿಂದ 9,000 ಕ್ಯೂಸೆಕ್ಸ್‌ಗೆ ಇಳಿಸಲು ಸರ್ಕಾರ ಯಶಸ್ವಿಯಾಗಿದೆ ಎಂದು ಸಚಿವರು ತಿಳಿಸಿದರು.