
ಸಹಾಯಕ ಎಕ್ಸಿಕ್ಯೂಟೀವ್ ಎಂಜಿನಿಯರ್ ಗ್ರೇಡ್ 1 ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಈ ನೇಮಕಾತಿಯಲ್ಲಿ 24 ಅಭ್ಯರ್ಥಿಗಳ ಆಯ್ಕೆಯಲ್ಲಿ ಅಕ್ರಮ ಸಾಬೀತಾಗಿದ್ದು, ಒಂದೊಂದು ಹುದ್ದೆಗೆ 80 ಲಕ್ಷ ರೂಪಾಯಿ ಹಣ ನಿಗದಿಪಡಿಸಲಾಗಿತ್ತು ಎಂದು ಅವರು ದೂರಿದ್ದಾರೆ.
ಅಕ್ರಮದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಅಂದಿನ ಪರೀಕ್ಷಾ ನಿಯಂತ್ರಕ ಗ್ಯಾನೇಂದ್ರ ಗಂಗ್ವಾರ್ ಅವರನ್ನು ಸಚಿವ ಪ್ರಿಯಾಂಕ್ ಖರ್ಗೆ ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ, ಅವರ ರಾಜೀನಾಮೆಗೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.