
ಬೆಂಗಳೂರು ನಗರದಲ್ಲಿ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ಧ ಜಿಬಿಎ (GBA) ಕಠಿಣ ಕ್ರಮಕ್ಕೆ ಮುಂದಾಗಿದ್ದು, ಶೇ 40ರಷ್ಟು ಪಿಜಿಗಳು ನಿಯಮ ಉಲ್ಲಂಘಿಸಿರುವುದು ಸಮೀಕ್ಷೆಯಿಂದ ತಿಳಿದುಬಂದಿದೆ.
ನಗರದಲ್ಲಿ ಒಟ್ಟು 25 ಸಾವಿರ ಪಿಜಿಗಳಿದ್ದು, ಅದರಲ್ಲಿ 10 ಸಾವಿರಕ್ಕೂ ಹೆಚ್ಚು ಪಿಜಿಗಳಿಗೆ ಲೈಸೆನ್ಸ್, ಕಟ್ಟಡದ ಅನುಮೋದಿತ ನಕ್ಷೆ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣಪತ್ರ ಇಲ್ಲದಿರುವುದು ಬೆಳಕಿಗೆ ಬಂದಿದೆ.
ಕೋರ್ಟ್ ಸೂಚನೆ ಮೇರೆಗೆ ಬೆಸ್ಕಾಂ ಹಾಗೂ ಜಲಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಜಿಬಿಎ, ನಿಯಮ ಉಲ್ಲಂಘಿಸಿದ ಪಿಜಿಗಳಿಗೆ 15 ದಿನಗಳ ನೋಟಿಸ್ ನೀಡಿ ಮೂಲಸೌಕರ್ಯ ಕಡಿತಗೊಳಿಸಲು ಸಿದ್ಧತೆ ನಡೆಸಿದೆ.