
ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ವಿಜಯಪುರದ ಆಲಮಟ್ಟಿ ಜಲಾಶಯವು 519.58 ಮೀಟರ್ ಮಟ್ಟ ತಲುಪಿ ಸಂಪೂರ್ಣ ಭರ್ತಿಯಾಗುವ ಹಂತದಲ್ಲಿದೆ.
ಹಾಸನದ ಹೇಮಾವತಿ ಜಲಾಶಯದಲ್ಲಿ 29.496 ಟಿಎಂಸಿ ನೀರಿದ್ದು, ಮಂಡ್ಯದ ಕೆಆರ್‌ಎಸ್ ಜಲಾಶಯದಲ್ಲಿ 32.004 ಟಿಎಂಸಿ ನೀರು ಸಂಗ್ರಹವಾಗಿದೆ.
ಆಲಮಟ್ಟಿ ಜಲಾಶಯಕ್ಕೆ 26,883 ಕ್ಯೂಸೆಕ್ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಹೊರಬಿಡಲಾಗುತ್ತಿದೆ ಎಂದು ಜಲಸಂಪನ್ಮೂಲ ಇಲಾಖೆ ತಿಳಿಸಿದೆ.