
ನಟ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಆಗಸ್ಟ್ 26ರಂದು ಬಿಡುಗಡೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಅವರು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.
ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್, ಅಲ್ಲಿಂದ ನೇರವಾಗಿ ಧರ್ಮಸ್ಥಳಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ತಮ್ಮ ಪ್ರತಿಯೊಂದು ಸಿನಿಮಾ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುವ ಸಂಪ್ರದಾಯವನ್ನು ಯಶ್ ಈ ಬಾರಿಯೂ ಮುಂದುವರಿಸಿದ್ದಾರೆ.